ಕಾರವಾರ: ನನ್ನ ಕಾಮಗಾರಿಗಳ ಬಗ್ಗೆ ನಿರಾಧಾರವಾಗಿ ಬೊಟ್ಟು ಮಾಡುತ್ತಿರುವವರರಿಗೆ ಕಾನೂನಿನ ಮೂಲಕ ಉತ್ತರಿಸುತ್ತೇನೆ. ಅಂಥವರು ಕಾನೂನು ಕ್ರಮ ಎದುರಿಸಲು ಸಿದ್ಧರಿರಿ ಎಂದು ಸಾಮಾಜಿಕ ಕಾರ್ಯಕರ್ತ ಮಾಧವ ನಾಯಕ ಎಚ್ಚರಿಕೆ ನೀಡಿದ್ದಾರೆ.
ಡಬಲ್ ಡಿಗ್ರಿ ಪಡೆದು ವಿದ್ಯಾವಂತರು ಎಂದು ಹೇಳಿಕೊಳ್ಳುವ ಕೆಲವರು ಬುದ್ಧಿಯಿಲ್ಲದಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೆಲವು ವಿಚಾರಗಳನ್ನು ಸರಿಯಾಗಿ ಅರಿಯದೇ, ಮನವಿಗಳನ್ನು ನೀಡುವುದು, ಪತ್ರಿಕಾ ಹೇಳಿಕೆಗಳನ್ನು ನೀಡುವುದು ಮಾಡುತ್ತಿದ್ದಾರೆ. ಯಾವುದನ್ನೂ ಅರಿತುಕೊಳ್ಳದೆ,ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದಾರೆ, ಅರ್ಧಂಬರ್ಧ ಮಾಹಿತಿಗಳಿಂದ ಈ ರೀತಿ ಮಾಡುತ್ತಿದ್ದಾರೆ. ಇಂಥವಕ್ಕೆಲ್ಲ ನಾನು ಪ್ರತಿಕ್ರಿಯಿಸಲು ಹೋಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಆದರೆ ನನ್ನ ಕಾಮಗಾರಿಗಳ ಬಗ್ಗೆ ಕೆಲವರು ಬೊಟ್ಟು ತೋರಿಸುವ ಕಾರ್ಯ ಮಾಡುತ್ತಿದ್ದು, ಅಂಥವರ ವಿರುದ್ಧ ಕಾನೂನಾತ್ಮಕವಾಗಿ ಮುಂದುವರಿಯುವೆ. ನಾನು ಮಾಡಿರುವ ಕಾಮಗಾರಿಗಳ ಬಗ್ಗೆ, ಕಾಮಗಾರಿಯ ದೃಢತೆಯ ಬಗ್ಗೆ ನನ್ನ ಮೇಲೆ ನನಗೆ ನಂಬಿಕೆ ಇದೆ. ಈ ಬಗ್ಗೆ ವಿನಾಕಾರಣ ಆರೋಪ ಮಾಡುತ್ತಾ ಸಾರ್ವಜನಿಕವಾಗಿ ತಪ್ಪು ಸಂದೇಶ ಹರಡುತ್ತಿರುವವರಿಗೆ ಕಾನೂನಿನ ಮೂಲಕ ಉತ್ತರ ನೀಡುತ್ತೇನೆ. ಅಂಥವರು ಕಾನೂನು ಕ್ರಮಗಳನ್ನು ಎದುರಿಸಲು ಸಿದ್ಧರಿರಿ ಎಂದು ಪ್ರಕಟಣೆಯ ಮೂಲಕ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.