ಯಲ್ಲಾಪುರ : ತಾಲೂಕಿನ 15 ಗ್ರಾಮ ಪಂಚಾಯತಿಗಳ ಸದಸ್ಯರು ಸೇರಿ ಹೊಸದಾಗಿ ಚುನಾಯಿತ ಗ್ರಾಮ ಪ್ರತಿನಿಧಿಗಳ ಒಕ್ಕೂಟವನ್ನು ರಚಿಸಲಾಗಿದ್ದು, ಒಕ್ಕೂಟದ ಉದ್ಘಾಟನೆಯು ಜೂ.25 ರ ಶನಿವಾರದಂದು ಪಟ್ಟಣದ ಅಡಕೆ ಭವನದಲ್ಲಿ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಎಂ.ಕೆ.ಭಟ್ಟ ಯಡಳ್ಳಿ ತಿಳಿಸಿದರು.
ಈ ಕುರಿತು ಪಟ್ಟಣದಲ್ಲಿ ಮಾತನಾಡಿದ ಅವರು, ಈ ಒಕ್ಕೂಟಕ್ಕೆ ಜನರ ಸಮಿತಿಯನ್ನು ರಚಿಸಲಾಗಿದೆ ಎಂದರು.
ಉದ್ಘಾಟನಾ ಕಾರ್ಯಕ್ರಮದ ಕುರಿತು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸದಾಶಿವ ಚಿಕ್ಕೊತ್ತಿ ಮಾತನಾಡಿ, ಈ ಕಾರ್ಯಕ್ರಮವನ್ನು ಸಚಿವ ಶಿವರಾಮ ಹೆಬ್ಬಾರ್ ಉದ್ಘಾಟಿಸುವರು. ಎಂ.ಕೆ.ಭಟ್ಟ ಅಧ್ಯಕ್ಷತೆ ವಹಿಸವರು. ಸತತವಾಗಿ 9 ಬಾರಿ ಆಯ್ಕೆಯಾದ ಶ್ರೀಕಾಂತ ಶೆಟ್ಟಿಯವರನ್ನು ಸನ್ಮಾನಿಸಲಾಗುವುದು. ವಿಧಾನ ಪರಿಷತ್ ಸದಸ್ಯರಾದ ಗಣಪತಿ ಉಳ್ವೇಕರ್, ಶಾಂತಾರಾಮ ಸಿದ್ದಿ, ಪ್ರಮುಖರಾದ ಪ್ರಮೋದ ಹೆಗಡೆ, ವಿ.ಎಸ್.ಪಾಟೀಲ್, ರಾಜ್ಯ ಚುನಾಯಿತ ಗ್ರಾಮ ಪ್ರತಿನಿಧಿಗಳ ಮಹಾ ಒಕ್ಕೂಟದ ಸತೀಶ ಕಾಡಶೆಟ್ಟಿಹಳ್ಳಿ, ತಹಸೀಲ್ದಾರ್ ಶ್ರಿಕೃಷ್ಣ ಕಾಮ್ಕರ್, ತಾಲೂಕಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ್ ಮುಂತಾದವರು ಪಾಲ್ಗೊಳ್ಳಲಿದ್ದಾರೆ. ಜನಪ್ರತಿನಿಧಿಗಳೊಂದಿಗೆ ಸಂವಾದ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ಒಕ್ಕೂಟದ ಉಪಾಧ್ಯಕ್ಷ ಗಜಾನನ ಭಟ್ಟ, ಹಾಗೂ ಪದಾಧಿಕಾರಿಗಳು ಇದ್ದರು.