ಯಲ್ಲಾಪುರ : ತಾಲೂಕಾ ಚುನಾವಣಾ ಗ್ರಾಮ ಪ್ರತಿನಿಧಿಗಳ ಒಕ್ಕೂಟದ ಉದ್ಘಾಟನಾ ಸಮಾರಂಭವು ಪಟ್ಟಣದ ಅಡಕೆ ಭವನದಲ್ಲಿ ಶನಿವಾರ ನಡೆಯಿತು.

ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪಂಚಾಯತ್ ರಾಜ್ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಇ-ಸೊತ್ತು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದರು.

ವಿಕೇಂದ್ರೀಕರಣ ಯೋಜನೆಯ ಉಪಾಧ್ಯಕ್ಷ ಪ್ರಮೋದ ಹೆಗಡೆ, ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ್ ಮಾತನಾಡಿದರು.

ಒಕ್ಕೂಟದ ಅಧ್ಯಕ್ಷ ಎಂ.ಕೆ.ಭಟ್ಟ ಯಡಳ್ಳಿ ಕಾರ್ಯಮಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಒಕ್ಕೂಟದ ಧ್ಯೇಯೋದ್ದೇಶಗಳನ್ನು ವಿವರಿಸಿದರು.

ಒಕ್ಕೂಟದ ರಾಜ್ಯಾಧ್ಯಕ್ಷ ಸತೀಶ ಕಾಡಶೆಟ್ಟಿಹಳ್ಳಿ ಮಾತನಾಡಿದರು.ನಿರಂತರವಾಗಿ ಒಂಬತ್ತು ಬಾರಿ ಗ್ರಾಮ ಪಂಚಾಯತಿ ಸದಸ್ಯರಾಗಿ ಆಯ್ಕೆಯಾದ ಶ್ರೀಕಾಂತ ಶೆಟ್ಟಿ ಗುಳ್ಳಾಪುರ ಅವರನ್ನು ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ತಾಲೂಕಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ್, ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸದಾಶಿವ ಚಿಕ್ಕೊತ್ತಿ, ಒಕ್ಕೂಟದ ಪದಾಧಿಕಾರಿಗಳಾದ ಸತೀಶ ನಾಯ್ಕ ಇಡಗುಂದಿ, ನಿರ್ಮಲಾ ನಾಯ್ಕ್ , ಕೆ.ಟಿ.ಹೆಗಡೆ, ಸುಬ್ಬಣ್ಣ ಕುಂಟೆಗಾಳಿ ವೇದಿಕೆಯಲ್ಲಿ ಇದ್ದರು.

ಒಕ್ಕೂಟದ ಉಪಾಧ್ಯಕ್ಷ ಗಜಾನನ ಭಟ್ಟ ಕಳಚೆ ಕಾರ್ಯಕ್ರಮವನ್ನು ನಿರ್ವಹಿಸಿದರು. ಆರ್.ಎಸ್.ಭಟ್ಟ ಸ್ವಾಗತಿಸಿದರು. ಗಣೇಶ ಹೆಗಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ದೀಪಕ ಭಟ್ಟ ಮಲವಳ್ಳಿ ವಂದಿಸಿದರು