ಅಂಕೋಲಾ :ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ವೇಳೆ ಜಿಲ್ಲಾ ವಿಶೇಷ ವಿಭಾಗದ ಪೊಲೀಸ್‍ ತಂಡ ದಾಳಿ ನಡೆಸಿ, 905 ಗ್ರಾಂ ಗಾಂಜಾ ಸಹಿತ ಆರೋಪಿಯನ್ನು ಬಂಧಿಸಿರುವ ಘಟನೆ ಹೊಸಕಂಬಿ ಕ್ರಾಸ್ ಬಳಿ ನಡೆದಿದೆ.

ಅಚವೆ ಗ್ರಾಮದ ವಿಷ್ಣುದೇವಾಗ್ಯ ಮರಾಠಿ ಆರೋಪಿಯಾಗಿದ್ದಾನೆ. ಇತನು ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವಾಗ ಪೊಲೀಸರು ದಾಳಿ ನಡೆಸಿ 55 ಸಾವಿರ ಮೌಲ್ಯದ 905ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಹಾಗೆ ಗಾಂಜಾವನ್ನು ವಿಷ್ಣುದೇವಾಗ್ಯ ಮರಾಠಿಗೆ ಮಾರಾಟ ಮಾಡಿದ ಆರೋಪದ ಮೇಲೆ ಅಚವೆಯ ಲಕ್ಷ್ಮೀ ದಿವಾಕರ ಮರಾಠೆ ಅವರ ಮೇಲೆಯೂ ಪ್ರಕರಣ ದಾಖಲಾಗಿದೆ.

ಜಿಲ್ಲಾ ವಿಶೇಷ ವಿಭಾಗದ ಪಿಎಸೈ ಪ್ರೇಮನಗೌಡ ಪಾಟೀಲ, ಸಿಬ್ಬಂದಿಗಳಾದ ರಾಘವೇಂದ್ರ ಜಿ, ಭಗವಾನ ಗಾಂವಕರ , ವೀರೇಶ್ ನಾಯ್ಕ್‍ ಕಾರ್ಯಾಚರಣೆಯ ತಂಡದಲ್ಲಿದ್ದರು. ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪೇನ್ನೇಕರ್ ಶ್ಲಾಘನೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

ಕಾರವಾರ ಟೈಮ್ಸ್ ನ್ಯೂಸ್ updates ಗಾಗಿ ಈ ಕೆಳಗಿನ ವಾಟ್ಸಪ್ ಲಿಂಕ್ ನ್ನು ಬಳಸಿಕೊಂಡು ಗ್ರೂಪ್ಗೆ ಸೇರಿಕೊಳ್ಳಿ…

https://chat.whatsapp.com/HyQE3CIKWEICSXQCoirwQE