ಅಂಕೋಲಾ: ತಾಲೂಕಿನಾದ್ಯಂತ ಇಂದು ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 63 ಕ್ಕೆ ಹೊಂದಿಕೊಂಡಿರುವ ಹಟ್ಟಿಕೇರಿಯ ಪಾಂಡುಪರ ಹೊಳೆಯು ಉಕ್ಕಿ ಹರಿಯುತ್ತಿದ್ದು ನದಿಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿದೆ.
ತಾಲೂಕಿನಲ್ಲೆಲ್ಲಾ ವರುಣನ ಆರ್ಭಟ ಹೆಚ್ಚಾಗಿದ್ದು, ಜನಜೀವನ ಅಸ್ಥವ್ಯಸ್ತಗೊಂಡಿದೆ. ನಿನ್ನೆಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪಾಂಡುಪರ ಹೊಳೆ ಉಕ್ಕಿ ಹರಿಯುತ್ತಿದ್ದು, ಇದೇ ರೀತಿ ಮುಂದುವರೆದರೆ ಕೆಲವು ದಿನಗಳಲ್ಲಿ ಅಪಾಯದ ಮಟ್ಟ ತಲುಪಲಿದೆ.
ಜಿಲ್ಲೆಯಲ್ಲಿ ಇನ್ನೂ 3 ದಿನಗಳ ಕಾಲ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆ ಮೀನುಗಾರರಿಗೆ ಕಡಲಿಗೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಿದೆ.
ಕಾರವಾರ ಟೈಮ್ಸ್ ನ್ಯೂಸ್ updates ಗಾಗಿ ಈ ಕೆಳಗಿನ ವಾಟ್ಸಪ್ ಲಿಂಕ್ ನ್ನು ಬಳಸಿಕೊಂಡು ಗ್ರೂಪ್ಗೆ ಸೇರಿಕೊಳ್ಳಿ…
https://chat.whatsapp.com/HyQE3CIKWEICSXQCoirwQE
