ಅಂಕೋಲಾ: ಪುರಸಭೆಯ ಸ್ಥಾಯಿ ಸಮತಿಯ ನೂತನ ಅಧ್ಯಕ್ಷರಾಗಿ ಬಿಜೆಪಿ ಪಕ್ಷದ ಬೆಂಬಲಿತ ಪುರಸಭಾ ಸದಸ್ಯ ಶ್ರೀಧರ ನಾಯ್ಕ್ ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿದರು.

ಪುರಸಭಾ ಕಾರ್ಯಾಲಯದಲ್ಲಿ ನಡೆದ ಈ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಶ್ರೀಧರ್ ನಾಯ್ಕ್ ರವರನ್ನು ಕಾರವಾರ ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ್ ಮುಂದಾಳುತ್ವದಲ್ಲಿ ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ರೂಪಾಲಿ ನಾಯ್ಕ್ ಮಾತನಾಡಿ ಮುಂದಿನ ಅವಧಿಯಲ್ಲಿ ಎಲ್ಲಾ ವಾರ್ಡುಗಳು ಅಭಿವೃದ್ಧಿ ಹೊಂದಬೇಕು.ಅಲ್ಲಿ ಯಾವ ಪಕ್ಷದ ಸದಸ್ಯರಿದ್ದಾರೆ ಎನ್ನುವುದಕ್ಕಿಂತ ನಮ್ಮ ಮೇಲೆ ಗೌರವವಿಟ್ಟಿ ರುವ ಬಹಳ ಜನರಿರುತ್ತಾರೆ. ಎಲ್ಲರನ್ನು ಒಗ್ಗೂಡಿಸಿಕೊಂಡು ನಾವು ಅಭಿವೃದ್ಧಿ ಮಾಡಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ ಮಾತನಾಡಿ ನಾನು 25 ಲಕ್ಷ ಅನುದಾನವನ್ನು ಪುರಸಭಾ ಅಭಿವೃದ್ಧಿಗೆ ನೀಡುತ್ತೇನೆ ಎಂದು ಘೋಷಿಸಿದರು.

ವೇದಿಕೆಯಲ್ಲಿ ಪುರಸಭಾ ಅಧ್ಯಕ್ಷೆ ಶಾಂತಲಾ ನಾಡಕರ್ಣಿ,ಉಪಾಧ್ಯಕ್ಷೆ ರೇಖಾ ಗಾಂವಕರ್. ಉಪಸ್ಥಿತರಿದ್ದು ಮಾತನಾಡಿದರು.

ಪುರಸಭಾ ಮುಖ್ಯಾಧಿಕಾರಿ ಎನ್ .ಎಮ್ .ಮೆಸ್ತಾ ಸ್ವಾಗತಿಸಿದರು. ಪುರಸಭಾ ಸದಸ್ಯರುಗಳು, ಭಾರತೀಯ ಜನತಾ ಪಕ್ಷದ ಪ್ರಮುಖರು,ಪದಾಧಿಕಾರಿಗಳು, ಪುರಸಭಾ ಸಿಬ್ಬಂಧಿಗಳು ಸೇ ರಿದಂತೆ ಇತರರಿದ್ದರು.

ಕಾರವಾರ ಟೈಮ್ಸ್ ನ್ಯೂಸ್ updates ಗಾಗಿ ಈ ಕೆಳಗಿನ ವಾಟ್ಸಪ್ ಲಿಂಕ್ ನ್ನು ಬಳಸಿಕೊಂಡು ಗ್ರೂಪ್ಗೆ ಸೇರಿಕೊಳ್ಳಿ…
https://chat.whatsapp.com/HyQE3CIKWEICSXQCoirwQE