ಅಂಕೋಲಾ : ಸ್ಪರ್ಧಾತ್ಮಕ ಯುಗದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದದೆ ಅಪೇಕ್ಷಿಸಿದ ಯಶಸ್ಸನ್ನು ಸಾಧಿಸುವುದು ಕಷ್ಟಸಾಧ್ಯ. ಅವಕಾಶಗಳಿಂದ ಯಶಸ್ಸು ಬಯಸುವ ಬದಲು ಆಯ್ಕೆಯಿಂದ ಸಾಧನೆಗೈಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮಿ ಪಾಟೀಲ ಹೇಳಿದರು.
ಪಟ್ಟಣದ ಕೆ.ಎಲ್.ಇ. ಶಿಕ್ಷಣ ಮಹಾವಿದ್ಯಾಲಯ ಮತ್ತು ಕಲ್ಪವೃಕ್ಷ ಸ್ಪರ್ಧಾತ್ಮಕ ತರಬೇತಿ ಕೇಂದ್ರ ಅಂಕೋಲಾ ಸಹಯೋಗದಲ್ಲಿ ಆಯೋಜಿಸಿದ್ದ 15 ದಿನಗಳ ಶಿಕ್ಷಕರ ಅರ್ಹತಾ ಪರೀಕ್ಷೆಯ ತರಬೇತಿ ಶಿಬಿರವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ. ವಿನಾಯಕ ಹೆಗಡೆ ಮಾತನಾಡಿ, ಕೆ.ಎಲ್.ಇ. ಶಿಕ್ಷಣ ಮಹಾವಿದ್ಯಾಲಯ ಹಲವು ವಿನೂತನ ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಮಾದರಿಯಾಗಿದ್ದು, ಶಿಕ್ಷಕರ ಅರ್ಹತಾ ಪರೀಕ್ಷೆಯ ತರಬೇತಿ ಕಾಲೇಜು ಶಿಕ್ಷಣದೊಂದಿಗೆ ನೀಡುತ್ತಿರುವುದು ವಿಶೇಷವಾಗಿದೆ ಎಂದರು.
ಕಲ್ಪವೃಕ್ಷ ಸಂಸ್ಥೆಯ ನಿರ್ದೇಶಕ ಮಾರುತಿ ಹರಿಕಂತ್ರ, ಮಾತನಾಡಿ, ವಿದ್ಯಾರ್ಥಿಗಳ ಅಪೇಕ್ಷೆಗೆ ತಕ್ಕಂತೆ ತರಬೇತಿ ನೀಡುವುದು ನಮ್ಮ ಆದ್ಯತೆಯಾಗಿದೆ ಎಂದರು.
ಕಲ್ಪವೃಕ್ಷ ಸಂಸ್ಥೆಯ ಮಾರ್ಗದರ್ಶಕ ಸುಧಾಕರ ಕಟ್ಟೆಮನೆ, ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಪುμÁ್ಪ ನಾಯ್ಕ ವೇದಿಕೆಯಲ್ಲಿದ್ದರು. ಗ್ಲೋರಿಯಾ ಸಂಗಡಿಗರು ಪ್ರಾರ್ಥಿಸಿದರು. ನೀಹಾ ಸೈಯದ್ ಸ್ವಾಗತಿಸಿದರು. ಶೃತಿ ಭಂಡಾರಿ ನಿರೂಪಿಸಿದರು. ಶ್ರದ್ಧಾ ನಾಯಕ ವಂದಿಸಿದರು. ಉಪನ್ಯಾಸಕರಾದ ಮಂಜುನಾಥ ಇಟಗಿ, ರಾಘವೇಂದ್ರ ಅಂಕೋಲೆಕರ, ಪ್ರವೀಣಾ ನಾಯಕ, ಪೂರ್ವಿ ಹಳ್ಗೇಕರ ಉಪಸ್ಥಿತರಿದ್ದರು.
ಕಾರವಾರ ಟೈಮ್ಸ್ ನ್ಯೂಸ್ updates ಗಾಗಿ ಈ ಕೆಳಗಿನ ವಾಟ್ಸಪ್ ಲಿಂಕ್ ನ್ನು ಬಳಸಿಕೊಂಡು ಗ್ರೂಪ್ಗೆ ಸೇರಿಕೊಳ್ಳಿ…https://chat.whatsapp.com/HyQE3CIKWEICSXQCoirwQE
