ಅಂಕೋಲಾ : ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಶನ್ ಹಾಗೂ ಬೆಂಗಳೂರು ಗ್ರಾಮಾಂತರ ಅಥ್ಲೆಟಿಕ್ಸ್ ಅಸೋಸಿಯೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಅಗಸ್ಟ್ 26, 27 ಮತ್ತು 28 ರಂದು ಕರ್ನಾಟಕ ರಾಜ್ಯ ಕಿರಿಯರ ಹಾಗೂ ಹಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಲಿದೆ
ಈ ಚಾಂಪಿಯನ್‌ಶಿಪ್‌ನಲ್ಲಿ ಪುರುಷ, ಮಹಿಳೆಯರು ಭಾಗವಹಿಸಲು ಅವಕಾಶವಿರುತ್ತದೆ. ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ತಮ್ಮ ಸಂಪೂರ್ಣ ಮಾಹಿತಿಯೊಂದಿಗೆ ಉತ್ತರ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ (ರಿ) ಕಾರವಾರ ಇದರ ಕಾರ್ಯದರ್ಶಿಗಳಾದ ಕೆ.ಆರ್. ನಾಯ್ಕ ಬೇಲೇಕೇರಿ ಮೊ.ನಂ. 9845846351 ಇವರನ್ನು ಸಂಪರ್ಕಿಸಲು ಜಿಲ್ಲಾ ಸಂಸ್ಥೆಯ ಅಧ್ಯಕ್ಷರಾದ ಸದಾನಂದ ನಾಯ್ಕ ಕಾರವಾರ ಸಂಸ್ಥೆಯ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೋಂದಣಿಗಾಗಿ ಅಗಸ್ಟ 18 ಕೊನೆಯ ದಿನಾಂಕವಾಗಿದೆ.
ಕಾರವಾರ ಟೈಮ್ಸ್ ನ್ಯೂಸ್ updates ಗಾಗಿ ಈ ಕೆಳಗಿನ ವಾಟ್ಸಪ್ ಲಿಂಕ್ ನ್ನು ಬಳಸಿಕೊಂಡು ಗ್ರೂಪ್ಗೆ ಸೇರಿಕೊಳ್ಳಿ…
https://chat.whatsapp.com/HyQE3CIKWEICSXQCoirwQE
