ಜೋಯಿಡಾ: ಕನ್ನಡ ಸಾಹಿತ್ಯ ಪರಿಷತ್ತು ಜೋಯಿಡಾ ಘಟಕದ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ತಾಲೂಕಿನ ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಭಾಷಣ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ತಹಶೀಲ್ದಾರ ಕಚೇರಿಯ ಪ್ರಾಂಗಣದಲ್ಲಿ ನಡೆದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.
ಉಪವಿಭಾಗಾಧಿಕಾರಿ ವಿಜಯಲಕ್ಷ್ಮಿ ರಾಯಕೋಡ ಕೈ.ಸಾ.ಪ. ಪರವಾಗಿ ವಿದ್ಯಾರ್ಥಿಗಳಿಗೆ ಕನ್ನಡದ ಶಾಲು ಹೊದಿಸಿ ಪ್ರಶಸ್ತಿ ಪತ್ರ ಹಾಗೂ ಬಹುಮಾನ ನೀಡಿ ಹಾರೈಸಿದರು.
ಈ ಸಂದರ್ಭದಲ್ಲಿ ಕ.ಸಾ.ಪ. ಅಧ್ಯಕ್ಷ ಪಾಂಡುರಂಗ ಪಟಗಾರ, ಮಾಜಿ ಅಧ್ಯಕ್ಷ ಸುಭಾಷ್ ಗಾವಡಾ, ಖಜಾಂಚಿ ಮಹಾದೇವ ಹಳದನಕರ ಹಾಗೂ ತಾಲೂಕಿನ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾರ್ವಜನಿಕರು ಮತ್ತು ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು
ಜೊಯಿಡಾ/ರಾಮನಗರದ ನ್ಯೂಸ್ updates ಗಾಗಿ ಈ ಕೆಳಗಿನ ವಾಟ್ಸಪ್ ಲಿಂಕ್ ನ್ನು ಬಳಸಿಕೊಂಡು ಗ್ರೂಪ್ಗೆ ಸೇರಿಕೊಳ್ಳಿ…https://chat.whatsapp.com/FwQPbtH4lkpE71sGaWxRXj
