ಜೋಯಿಡಾ –  ಸಮಾಜವನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು. ವಿದ್ಯೆಯನ್ನು ಕೊಡುವುದು ಬಹಳ ಉತ್ತಮ ಕೆಲಸ. ಜೋಯಿಡಾದಂತಹ ಪ್ರದೇಶದಲ್ಲಿ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಶಿಕ್ಷಕರಿಗೆ ನನ್ನ ಅಭಿನಂದನೆ ಎಂದು ಜೋಯಿಡಾ – ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

 ಅವರು ಜೋಯಿಡಾ ತಾಲೂಕಿನ ಕುಣಬಿ ಭವನದಲ್ಲಿ ಶಿಕ್ಷಕ ದಿನಾಚರಣೆ ಅಂಗವಾಗಿ ನಡೆದ ಗುರಗೌರವಾರ್ಪಣ ಕಾರ್ಯಕ್ರಮದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಹುಟ್ಟಿದ ದಿನದಂದು ಶಿಕ್ಷಕರ ದಿನಾಚರಣೆ ಆಚರಿಸುತ್ತಾರೆ. ಜೋಯಿಡಾ ತಾಲೂಕಿನಲ್ಲಿ ಸರ್ಕಾರಿ ಶಾಲೆಗಳೇ ಹೆಚ್ಚಿದೆ. ಇಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರು ಕಷ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ. ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲ ಹಾಗೂ ಕಾಡು ಗುಡ್ಡಗಳ ನಡುವೆ ಇರುವ ಶಾಲೆಗೆ ದಿನವು ಶಾಲೆಗೆ ಹೋಗಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿರುವ ಶಿಕ್ಷಕರು ನಿಜವಾಗಿಯೂ ಅಭಿನಂದನಾ ಅರ್ಹರು. 

ಶಿಕ್ಷಣದಲ್ಲಿ ಸ್ವರ್ಧೆ ಹೆಚ್ಚಿದೆ. ವಿದ್ಯಾರ್ಥಿಗಳು ಸಾಧನೆ ಮಾಡಲು  ಯಶಸ್ವಿಯಾಗಲು ಶಿಕ್ಷಕರ ಜವಾಬ್ದಾರಿ ಅತ್ಯಗತ್ಯ. ಜೋಯಿಡಾದಲ್ಲಿ ಶಿಕ್ಷಣದ ಪ್ರಮಾಣ ಹೆಚ್ಚಿದೆ. ಈ ತಾಲೂಕಿನ ವಿದ್ಯಾರ್ಥಿಗಳು ಹೆಚ್ಚಿನ ಶಿಕ್ಷಣ ಪಡೆಯುತ್ತಿದ್ದಾರೆ. ನಾನು ಮೊದಲು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡಿದ್ದೇನೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಒಂದು ರಾಷ್ಟ್ರದ ಅಭಿವೃದ್ಧಿಗೆ ಶಿಕ್ಷಣ ಅವಶ್ಯಕವಾಗಿದೆ. ಶಿಕ್ಷಣ ನೀಡುವುದು ಪವಿತ್ರವಾದ ಕೆಲಸ ,ಈ ಬಗ್ಗೆ ನನಗೆ ಅಭಿಮಾನವಿದೆ, ಶಿಕ್ಷಕರು ಆಸಕ್ತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಬೇಕು ಎಂದರು.

 ಜೋಯಿಡಾ ಗ್ರಾಮ ಪಂಚಾಯತ ಅಧ್ಯಕ್ಷ ಅರುಣ ಕಾಂಬ್ರೆಕರ ಮಾತನಾಡಿ ಯಾವುದೇ ಉನ್ನತ ಹುದ್ದೆಗೆ ಹೋಗಬೇಕೆಂದರೆ ಶಿಕ್ಷಣ ಮಹತ್ವದಾಗಿದೆ ಎಂದು ಶಿಕ್ಷಕರ ದಿನಾಚರಣೆಯ ಶುಭಾಶಯ ತಿಳಿಸಿದರು‌.

ಈ ಸಂದರ್ಭದಲ್ಲಿ ಬಹಳಷ್ಟು ಶಿಕ್ಷಕರಿಗೆ ಗೌರವ ಸನ್ಮಾನ ಹಾಗೂ ಆರ್.ವಿ.ದೇಶಪಾಂಡೆ ಅವರಿಂದ ತಾಲೂಕಿನ ಎಲ್ಲಾ ಶಿಕ್ಷಕರಿಗೆ ಬ್ಯಾಗ್ ಹಾಗೂ ಶಿಕ್ಷಣ ಇಲಾಖೆಯಿಂದ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ  ಲ್ಯಾಪ್‌ಟಾಪ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಜೋಯಿಡಾ ಬ್ಲಾಕ ಕಾಂಗ್ರೆಸ್ ಅಧ್ಯಕ್ಷ ಸದಾನಂದ ದಬ್ಗಾರ, ಮಾಜಿ ಜಿ.ಪಂ.ಸದಸ್ಯ ರಮೇಶ ನಾಯ್ಕ, ಸಂಜಯ ಹಣಬರ, ಶಕುಂತಲಾ ಹಿರೇಗೌಡರ, ಶ್ಯಾಮ‌ ಪೊಕಳೆ,ಸಂತೋಷ ಮಂಥೇರೋ, ಶಿಕ್ಷಣ ಇಲಾಕೆಯ ಸಂತೋಷ ಸಾಳುಂಕೆ, ಕ.ಸಾ.ಪ.ಜಿಲ್ಲಾಧ್ಯಕ್ಷ ಬಿ.ಎನ್.ವಾಸರೆ, ತಾಲೂಕಾ ಅಧ್ಯಕ್ಷ ಪಾಂಡುರಂಗ ಪಟಗಾರ, ಕ್ಷೇತ್ರ ಶಿಕ್ಷಣಾಧಿಕಾರಿ ಬಷೀರ್ ಶೇಕ್ ,ವಿನಯ ದೇಸಾಯಿ, ಚಂದ್ರಕಾಂತ ದೇಸಾಯಿ, ಶ್ರೀಧರ ದಬ್ಗಾರ ರವಿ ರೆಡ್ಕರ್,ರಪೀಖ ಖಾಜಿ, ರಾಜಾ ದೇಸಾಯಿ ಉಪಸ್ಥಿತರಿದ್ದರು, ಕಾರ್ಯಕ್ರಮವನ್ನು ಶಿಕ್ಷಕ ಭಾಸ್ಕರ ಗಾಂವ್ಕರ್ ನಿರ್ವಹಿಸಿದರು.