ಅಂಕೋಲಾ : ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಅವಿವಾಹಿತ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಬ್ಬುಳದ ಅರಣ್ಯ ಪ್ರದೇಶದಲ್ಲಿ ಮಂಗಳವಾರ ನಡೆದಿದೆ.
ಮೂಲತ: ಅವರ್ಸಾದವರರಾದ, ಹಾಲಿ ಹೆಬ್ಬುಳದ ನಿವಾಸಿ ಅಮಿತ ಕಮಾಲಕರ ತಳೇಕರ (32) ಆತ್ಮಹತ್ಯೆ ಮಾಡಿಕೊಂಡ ಯುವಕ.
ಗೌಂಡಿ ಕೆಲಸ ಮಾಡುತ್ತಿದ್ದ ಅಮಿತ್ ಕಳೆದ ೨ ದಿನದಿಂದ ಮನೆಯಿಂದ ನಾಪತ್ತೆಯಾಗಿದ್ದ ಎಂದು ತಿಳಿದುಬಂದಿದೆ. ಮಂಗಳವಾರ ಮದ್ಯಾಹ್ನ ಹೆಬ್ಬುಳದ ಅರಣ್ಯ ಪ್ರದೇಶದಲ್ಲಿ ಅಮಿತ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ಏನೆಂಬುದನ್ನು ಪತ್ತೆ ಹಚ್ಚಲು ಪೊಲೀಸರು ವಿವಿಧ ಆಯಾಮಗಳಿಂದ ತನಿಖೆ ಕೈಗೊಂಡಿದ್ದಾರೆ.
ಮೃತ ಅಮಿತ ಇರ್ವರು ಅಣ್ಣಂದಿರು, ತಮ್ಮ, ತಂಗಿ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾನೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಅಮಿತನ ಮರಣೋತ್ತರ ಪರೀಕ್ಷೆಗಾಗಿ ಇಲ್ಲಿನ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಪೊಲೀಸ ಪ್ರಕರಣ ದಾಖಲಿಸಲು ಕ್ರಮಗೊಂಡಿದ್ದಾರೆ.