TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ನಕಲಿ ಪತ್ರಕರ್ತರನ್ನು ನಿಗ್ರಹಿಸುವಂತೆ ಅಂಕೋಲಾ ಕಾರ್ಯನಿರತ ಪತ್ರಕರ್ತರಿಂದ ಮನವಿ

Feb 17, 2024 | Uncategorized |

ನಕಲಿ ಪತ್ರಕರ್ತರನ್ನು ನಿಗ್ರಹಿಸುವಂತೆ ಅಂಕೋಲಾ ಕಾರ್ಯನಿರತ ಪತ್ರಕರ್ತರಿಂದ ಮನವಿ

ಅಂಕೋಲಾ : ತಾಲೂಕಿನಲ್ಲಿ ಪತ್ರಕರ್ತರೆಂದು ಹೇಳಿಕೊಂಡು ಪೊಲೀಸ್ ಠಾಣೆ ಹಾಗೂ ವಿವಿಧ ಇಲಾಖೆಗಳಲ್ಲಿ ಕೆಲವು ವ್ಯಕ್ತಿಗಳು ಒತ್ತಡ ಹಾಕಿ ತಾವು ಕೂಡ ವರದಿಗಾರರು ಎನ್ನುವಂತೆ ಅವರಿಗೆ ಕಿರುಕುಳ ನೀಡಿ ಲಾಭ ಪಡೆದುಕೊಳ್ಳುತ್ತಿರುವುದರಿಂದ ಅಸಲಿ ಪತ್ರಕರ್ತರಿಗೆ ಕೆಟ್ಟ ಹೆಸರು ಬರುವಂತಾಗಿದೆ. ಹೀಗಾಗಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪೊಲೀಸ್ ನಿರೀಕ್ಷಕರಿಗೆ ಶನಿವಾರ ಮನವಿ ಸಲ್ಲಿಸಿದರು.

ಪೊಲೀಸ್ ಠಾಣೆ ಎದುರು ಬೆಳಿಗ್ಗೆ, ಮಧ್ಯಾಹ್ನ, ಸಂಜೆ, ರಾತ್ರಿ ಎನ್ನದೇ ಕೆಲವರು ಅಲ್ಲಿಯೇ ಠಿಕಾಣಿ ಹೂಡಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಲು ಬಂದವರನ್ನು ಠಾಣೆಗೆ ಹೋಗುವ ದಾರಿ ಮಧ್ಯೆದಲ್ಲಿ ತಡೆದು ನಿಮಗೆ ಏನಾಗಬೇಕಾಗಿದೆ ನಾವಿದ್ದೇವೆ. ನಾವು ಪತ್ರಕರ್ತರು ಎಂದು ಹೇಳಿಕೊಂಡು ನಿಮ್ಮ ಸಮಸ್ಯೆ ನಾವು ಬಗೆಹರಿಸಿಕೊಡುತ್ತೇವೆ. ಏನೇ ಇದ್ದರೂ ನಮ್ಮ ಬಳಿ ಹೇಳಿ ಎಂದು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಮಾತುಕತೆ ನಡೆಸುತ್ತಾರೆ.

ದೂರು ಕೊಡಲು ಬಂದವರ ಮೊಬೈಲ್ ನಂ. ಪಡೆದು ಅವರನ್ನು ಬೇರೆ ಬೇರೆ ರೀತಿಯಾಗಿ ಪೀಡಿಸುತ್ತಾರೆ. ಹೀಗೆ ಅನೇಕ ಪ್ರಕರಣ ಈ ಭಾಗದಲ್ಲಿ ನಡೆದಿದೆ. ಇದರ ಜತೆಗೆ ತಾಲೂಕಿನಲ್ಲಿ ಇನ್ನೂ ಅನೇಕ ವ್ಯಕ್ತಿಗಳು ತಾವು ಪತ್ರಕರ್ತರೆಂದು ಹೇಳಿಕೊಂದು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಬೆದರಿಸಿ ಹಣ ಪಡೆಯುವ ವಿಚಾರವು ಗಮನಕ್ಕೆ ಬಂದಿರುತ್ತದೆ. ದಯವಿಟ್ಟು ಇಂತಹ ಕೃತ್ಯಗಳನ್ನು ಮಾಡುತ್ತಿರುವವರನ್ನು ತಾವು ತಡೆಯಬೇಕೆಂದು ಅವರು ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.

ಪೊಲೀಸ್ ನಿರೀಕ್ಷಕ ಶ್ರೀಕಾಂತ ತೋಟಗಿ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪಿಎಸೈ ಉದ್ದಪ್ಪ ದರೆಪ್ಪನವರ, ಪತ್ರಕರ್ತರ ಸಂಘದ ಅಧ್ಯಕ್ಷ ಅರುಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಿದ್ಯಾಧರ ಮೊರಬಾ, ಗೌರವಾಧ್ಯಕ್ಷ ರಾಘು ಕಾಕರಮಠ, ಪದಾಧಿಕಾರಿಗಳಾದ ವಾಸುದೇವ ಗುನಗಾ, ನಾಗರಾಜ ಮಂಜಗುಣಿ, ವಿಠ್ಠಲದಾಸ ಕಾಮತ, ಸುಭಾಶ ಕಾರೇಬೈಲ್, ಕೆ. ರಮೇಶ, ಮಾರುತಿ ಹರಿಕಂತ್ರ, ಅಕ್ಷಯ ನಾಯ್ಕ, ನಾಗರಾಜ ಜಾಂಬಳೇಕರ ಉಪಸ್ಥಿತರಿದ್ದರು.

Share:

Rate:

Previousಅಂಕೋಲಾ ಕೆನರಾ (ಸಿಂಡಿಕೇಟ್) ಬ್ಯಾಂಕಿನ ಮ್ಯಾನೇಜರ್ ವೆಂಕಟೇಶ ಮಜ್ಜಿಗುಡ್ಡಾ ಸೇವೆಯಿಂದಲೆ ವಜಾ
Nextಸಾಹಿತಿ ವಿಷ್ಣು ನಾಯ್ಕ ಇನ್ನಿಲ್ಲ : ಬಾರದ ಲೋಕಕ್ಕೆ ಪಯಣ ಬೆಳೆಸಿದ ಸಾಹಿತ್ಯದ ಕೃಷಿಕಾರ.

Related Posts

ಪೊಲೀಸರ ಮಹತ್ತರ ಸೇವೆಯ ಹಿಂದೆ ಪೊಲೀಸ ಕುಟುಂಬದ ತ್ಯಾಗವು ಮಹತ್ವದಾಗಿದೆ : ಸಂತೋಷ ಶೆಟ್ಟಿ.

ಪೊಲೀಸರ ಮಹತ್ತರ ಸೇವೆಯ ಹಿಂದೆ ಪೊಲೀಸ ಕುಟುಂಬದ ತ್ಯಾಗವು ಮಹತ್ವದಾಗಿದೆ : ಸಂತೋಷ ಶೆಟ್ಟಿ.

January 2, 2024

ಕಾರವಾರದ ಲಾಡ್ಜಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 6 ಎಲೆ ಮಾನವರ ಬಂಧನ

ಕಾರವಾರದ ಲಾಡ್ಜಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 6 ಎಲೆ ಮಾನವರ ಬಂಧನ

September 7, 2023

ಅಲಗೇರಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸಂತೋಷ್ ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಶೋಭಾ ಗೋವಿಂದ ಆಗೇರ ಜಯಭೇರಿ. ಕಾಂಗ್ರೆಸ್ ಗೆ ಅಭೂತಪೂರ್ವ ಮುನ್ನಡೆ: ಸೈಲ್ ಶುಭಾಶಯ

ಅಲಗೇರಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸಂತೋಷ್ ನಾಯ್ಕ ಹಾಗೂ ಉಪಾಧ್ಯಕ್ಷರಾಗಿ ಶೋಭಾ ಗೋವಿಂದ ಆಗೇರ ಜಯಭೇರಿ. ಕಾಂಗ್ರೆಸ್ ಗೆ ಅಭೂತಪೂರ್ವ ಮುನ್ನಡೆ: ಸೈಲ್ ಶುಭಾಶಯ

August 9, 2023

ದಿನಕರ ವೇದಿಕೆಯಿಂದ ಅಕ್ಷರ ಬ್ರಹ್ಮ ದಿನಕರ ದೇಸಾಯಿ ಅವರ ಜನ್ಮಾಚರಣೆ

ದಿನಕರ ವೇದಿಕೆಯಿಂದ ಅಕ್ಷರ ಬ್ರಹ್ಮ ದಿನಕರ ದೇಸಾಯಿ ಅವರ ಜನ್ಮಾಚರಣೆ

September 11, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
    ಇಂದು ಅಂಕೋಲಾಕ್ಕೆ ಆಗಮಿಸಿ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಗೋಪಾಲಕೃಷ್ಣ ನಾಯಕ
  • ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
    ಹಾಡು ಹಗಲೇ ಕಾಂಗ್ರೆಸ್ ಮುಖಂಡ ಗೋಪಾಲ ಕೃಷ್ಣ ನಾಯಕ ಮೇಲೆ ಕೊಲೆ ಯತ್ನ: ಚಾಕುವಿನಿಂದ ಇರಿದು ಪರಾರಿಯಾದ ಗ್ಯಾಂಗ್
  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy