TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಸಾಹಿತಿ ವಿಷ್ಣು ನಾಯ್ಕ ಇನ್ನಿಲ್ಲ : ಬಾರದ ಲೋಕಕ್ಕೆ ಪಯಣ ಬೆಳೆಸಿದ ಸಾಹಿತ್ಯದ ಕೃಷಿಕಾರ.

Feb 18, 2024 | ವಿಶೇಷ |

ಸಾಹಿತಿ ವಿಷ್ಣು ನಾಯ್ಕ ಇನ್ನಿಲ್ಲ : ಬಾರದ ಲೋಕಕ್ಕೆ ಪಯಣ ಬೆಳೆಸಿದ ಸಾಹಿತ್ಯದ ಕೃಷಿಕಾರ.

ಅಂಕೋಲಾ : ನಾಡಿನ ನಾಮಾಂಕಿತ ಸಾಹಿತಗಳು, ಪತ್ರಕರ್ತರು ವಿಷ್ಣು ನಾಯ್ಕ (೮೫) ಅವರು ಶನಿವಾರ ರಾತ್ರಿ ವಿಧಿವಶರಾಗಿದ್ದಾರೆ.

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ಕಾರವಾರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಷ್ಣು ನಾಯ್ಕ ಅವರು ಬಾರದ ಲೋಕಕ್ಕೆ ಪಯಣ ಬೆಳಿಸಿದ್ದಾರೆ. ತಮ್ಮ ಬರವಣೆಯ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ವಿಷ್ಣು ನಾಯ್ಕ ಹೊಂದಿದ್ದರು.

ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಅಂಬಾರಕೊಡ್ಲದಲ್ಲಿ ೧೯೪೪ ಜುಲೈ ೧ ರಂದು ಜನಿಸಿದರು. ತಾಯಿ ಬುದವಂತಿ, ತಂದೆ ನಾಗಪ್ಪ ಅವರ ಪ್ರತಿಭಾವಂತ ಪುತ್ರನಾಗಿದ್ದ ವಿಷ್ಣು ನಾಯ್ಕ ಅವರು ಅಂಬಾರಕೊಡ್ಲ ಹಾಗೂ ಅಂಕೋಲಾದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಇವರು ಮೈಸೂರು ವಿಶ್ವವಿದ್ಯಾಲಯದಿಂದ ಜಾನಪದ ಸಾಹಿತ್ಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಸಾಹಿತಿ, ಸಂಪಾದಕ, ಪ್ರಕಾಶಕ, ಸಂಘಟಕ ಹೀಗೆ ಅನೇಕ ಕ್ಷೇತ್ರದಲ್ಲಿ ಕೃಷಿ ಸಾಧಿಸಿದ್ದಾರೆ.

ರಾಘವೇಂದ್ರ ಪ್ರಕಾಶನದ ಮಾಲೀಕರು ಆಗಿದ್ದ ಇವರು ಬರೆದ ಪ್ರಮುಖ ಕೃತಿಗಳೆಂದರೆ ಸುಮನ, ಆ ರೀತಿ ಈ ರೀತಿ, ನನ್ನ ಅಂಬಾರಕೊಡಲು, ವಾಸ್ತವ, ಹೊಸಭತ್ತ ಮುಚ್ಚಿದ ಬಾಗಿಲು ಮತ್ತು ಮರಿಗುಬ್ಬಿ, ನೋವು ಪ್ರೀತಿಯ ಪ್ರಶ್ನೆ (ಕವನ ಸಂಗ್ರಹಗಳು) ಕಣ್ಣೀರ ಕತೆಗಳು (ಸಂಕಲನ) ಅಯ್ನೋರ ಪೂಜೆ; ಒಂದು ಹನಿ ಮತ್ತು ಇತರ ಬೀದಿನಾಟಕಗಳು; ಯುದ್ಧ (ನಾಟಕಗಳು) ಡಾ. ಗೌರೀಶ ಕಾಯ್ಕಿಣಿ ಸಮಗ್ರ ಸಂಪುಟಗಳು (ಸಂಪಾದನೆ) ದುಡಿಯುವ ಕೈಗಳ ಹೋರಾಟದ ಕತೆ (ಮಾನವಿಕ) ಮುಂತಾದವುಗಳು ವಿಷ್ಣು ನಾಯ್ಕ ಅವರ ಕಲ್ಪನೆಯಲ್ಲಿ ಮೂಡಿ ಬಂದ ಸಾಹಿತ್ಯದ ಗರಿಗಳು.

ಕೆ.ಎಚ್. ಪಾಟೀಲರ ಸಂಪಾದಕತ್ವದಲ್ಲಿ ಹೊರ ತರುತ್ತಿದ್ದ ‘ವಿಶಾಲ ಕರ್ನಾಟಕ’ ದೈನಿಕ ಪತ್ರಿಕೆಯ ಪಾಕ್ಷಿಕ ಅಂಕಣಕಾರರಾಗಿ, ಮಂಗಳೂರಿನ ವಡ್ಡರ್ಸೆ ರಘುರಾಮ ಶೆಟ್ಟರ ಸಂಪಾದಕತ್ವದಲ್ಲಿ ತರುತ್ತಿದ್ದ ‘ಮುಂಗಾರು’ ದೈನಿಕ ಪತ್ರಿಕೆಯ ವರದಿಗಾರರಾಗಿ, ‘ಕರಾವಳಿ ಮುಂಜಾವು’, ‘ಕರಾವಳಿ ಸುಪ್ರಭಾತ’, ‘ಮುನ್ನಡೆ’, ‘ತೇಜಸ್ವಿ ಪ್ರಪಂಚ’, ಮುಂತಾದ ಪತ್ರಿಕೆಗಳ ಅಂಕಣಕಾರರಾಗಿ ಕಾರ್ಯನಿರ್ವಹಣೆ ಮಾಡಿ ಮಾಧ್ಯಮ ಕ್ಷೇತ್ರಕ್ಕೆ ಅಪಾರ ಕೊಡುಗೆ ಸಲ್ಲಿಸಿದ ವಿಷ್ಣು ನಾಯ್ಕ ಸಾಹಿತ್ಯ ಮೇರು ಪರ್ವತವಾಗಿ ಗುರುತಿಸಿಕೊಂಡಿದ್ದರು.

ಇವರ ಸಾಹಿತ್ಯ ಕೊಡುಗೆಗಾಗಿ ಕರ್ನಾಟಕ ರಾಜೊತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ರಾಜ್ಯ ಆದರ್ಶ ಶಿಕ್ಷಕ ಪ್ರಶಸ್ತಿ, ಅತ್ಯುತ್ತಮ ಗ್ರಂಥ ಪ್ರಕಾಶಕ ಪ್ರಶಸ್ತಿ, ಎಸ್.ವಿ. ಪರಮೇಶ್ವರ ಭಟ್ಟರ ಕನ್ನಡ ಪರಿಚಾರಕ ಪ್ರಶಸ್ತಿ, ಬೇಂದ್ರೆ ಕಾವ್ಯ ಪ್ರಶಸ್ತಿ, ಕಾಯ್ಕಿಣಿ ಪ್ರತಿಷ್ಠಾನ ಪ್ರಶಸ್ತಿ, ಚೌಡಯ್ಯ ಸಾಹಿತ್ಯ ಪ್ರಶಸ್ತಿಗಳು ಅವರನ್ನರಸಿವೆ. ಉತ್ತರ ಕನ್ನಡ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ, ರಾಜ್ಯ ಹಲವಾರು ಸಾಹಿತ್ಯ ಗೋಷ್ಠಿಗಳ ಅಧ್ಯಕ್ಷತೆಯ ಹಾಗೂ ಮತ್ತಿತರ ಗೌರವ ಪುರಸ್ಕಾರಗಳು ಅವರಿಗೆ ಸಂದಿವೆ.

ಮೃತ ವಿಷ್ಣು ನಾಯ್ಕ ಅವರು ಇರ್ವರು ಪುತ್ರಿಯರು, ಅಳಿಯಂದಿರು ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.

ರಾಘು ಕಾಕರಮಠ.

Share:

Rate:

Previousನಕಲಿ ಪತ್ರಕರ್ತರನ್ನು ನಿಗ್ರಹಿಸುವಂತೆ ಅಂಕೋಲಾ ಕಾರ್ಯನಿರತ ಪತ್ರಕರ್ತರಿಂದ ಮನವಿ
Nextಸಾವಿನಲ್ಲೂ ಒಂದಾದ ತಾಯಿ – ಮಗ

Related Posts

ನಿರ್ಗಮಿತ ಜಿಲ್ಲಾಧಿಕಾರಿಗೆ ಜನಶಕ್ತಿ ಸನ್ಮಾನ

ನಿರ್ಗಮಿತ ಜಿಲ್ಲಾಧಿಕಾರಿಗೆ ಜನಶಕ್ತಿ ಸನ್ಮಾನ

August 2, 2023

ಅಂಕೋಲಾ ಸಿಟಿ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಡಾ. ವಿಜಯದೀಪ್

ಅಂಕೋಲಾ ಸಿಟಿ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಡಾ. ವಿಜಯದೀಪ್

July 10, 2023

ಮಾಂಗಲ್ಯ ಸರವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟ ರ್ ಎ.ಎ.ಮುಜಾವರ

ಮಾಂಗಲ್ಯ ಸರವನ್ನು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟ ರ್ ಎ.ಎ.ಮುಜಾವರ

September 23, 2023

ಕೃಷಿ ಜಾಗೃತಿಯ ಆಂದೋಲನಕ್ಕೆ ಅಭಿಯಾನ ರೂಪಿಸಿದ ಬೆಳೆಗಾರರ ಸಮಿತಿ

ಕೃಷಿ ಜಾಗೃತಿಯ ಆಂದೋಲನಕ್ಕೆ ಅಭಿಯಾನ ರೂಪಿಸಿದ ಬೆಳೆಗಾರರ ಸಮಿತಿ

July 28, 2023

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy