ಡಾ. ಸವಿತಾ ನಾಯಕ ದೇವರಭಾವಿ ಅವರಿಗೆ ರಾಜ್ಯ ಅಧ್ಯಾಪಕ ಭೂಷಣ ಪ್ರಶಸ್ತಿ ಪ್ರಧಾನ
ಅಂಕೋಲಾ : ತಾಲೂಕಿನ ಪ್ರತಿಷ್ಠಿತ ಪೂಜಗೇರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ಅಧಿಕಾರಿಯಾಗಿರುವ ಡಾ. ಸವಿತಾ ನಾಯಕ. ದೇವರಬಾವಿ ಅವರಿಗೆ ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘ ಕೊಡಮಾಡುವ ರಾಜ್ಯ ಅಧ್ಯಾಪಕ ಭೂಷಣ ಪ್ರಶಸ್ತಿಯನ್ನು ಕವಿವಿ ಧಾರವಾಡದಲ್ಲಿ ನೀಡಿ ಗೌರವಿಸಲಾಯಿತು.

ಇವರು ಕಳೆದ 16 ವರ್ಷಗಳಿಂದ ಕಾಲೇಜಿನ ಮುಖ್ಯ ಗ್ರಂಥಾಪಾಲಕ ಮತ್ತು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಸವಿತಾ ನಾಯಕ ಅವರುಕಾಲೇಜಿನ ಗ್ರಂಥಾಲಯವನ್ನು ಗಣಕೀಕರಣ ಗೊಳಿಸಿ ಪ್ರತ್ಯೇಕವಾದ ಗ್ರಂಥಾಲಯ ವೆಬಸೈಟನ್ನು ರೂಪಿಸಿ ವಿದ್ಯಾರ್ಥಿಗಳಿಗೆ ಸರಳವಾಗಿ ಮಾಹಿತಿ ಲಭ್ಯವಾಗುವಂತೆ ಮಾಡಿ ಮಾದರಿಯಾಗಿದ್ದಾರೆ.
ಹೈದ್ರಾಬಾದನ ಟಾಟಾ ಕನ್ಸಟೆನ್ಸಿ ಯಲ್ಲಿ ಕೆಲಸ ಮಾಡಿದ್ದ ಇವರು ಮಾಹಿತಿ ತಂತ್ರಜ್ಞಾನದಲ್ಲಿ ವಿಶೇಷ ತರಭೇತಿ ಹೊಂದಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಅನೇಕ ಪ್ರಬಂಧಗಳನ್ನು ಮಂಡಿಸಿ ಈ ವಿಭಾಗದಲ್ಲಿ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಶೈಕ್ಷಣಿಕವಾಗಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಆರು ಚಿನ್ನದ ಪದಕಗಳನ್ನು ಗಳಿಸಿರುವ ಇವರು ಅನೇಕ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಇವರ ಸಾಮಾಜಿಕ ಚಟುವಟಿಕೆಗಳ ಕಾರ್ಯದಕ್ಷತೆ ಹಾಗೂ ಅವರ ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಗಳಿಗಾಗಿ ಅವರಿಗೆ ಅತ್ಯುತ್ತಮ ರಾಜ್ಯ ಅಧ್ಯಾಪಕ ಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಪ್ರಶಸ್ತಿಗೆ ಭಾಜನರಾದ ಸವಿತಾ ನಾಯಕ ಅವರು ಕಾರವಾರದ ಶಿವಾಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾದ್ಯಾಪಕ ನವೀನ ದೇವರಬಾವಿ ಅವರ ಪತ್ನಿಯಾಗಿದ್ದಾರೆ. ಇವರ ಸಾಧನೆಗೆ ಕಾಲೇಜಿನ ಪ್ರಾಚಾರ್ಯರು ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿ ವೃಂದ ಅಭಿನಂದಿಸಿದೆ