ಹೃದಯಾಘಾತದಿಂದ ಕ್ರಿಯಾಶೀಲ ನಿವೃತ್ತ ಶಿಕ್ಷಕ ಪ್ರಕಾಶ ಕುಂಜಿ ನಿಧನ

ಅಂಕೋಲಾ : ಸಮಾಜಮುಖಿ ವ್ಯಕ್ತಿತ್ವದ ಹೆಸರಾಂತ ನಿವೃತ್ತ ಶಿಕ್ಷಕ ಪ್ರಕಾಶ ಕುಂಜಿ (70) ಅವರು ಗುರುವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು.
ಪತ್ನಿಯನ್ನು ಅಗಲಿದ್ದ ಪ್ರಕಾಶ ಕುಂಜಿ ಅವರು ಮನೆಯಲ್ಲಿ ಬಬ್ಬರೆ ಇರುತ್ತಿದ್ದರು. ಗುರುವಾರ ಮದ್ಯಾಹ್ನ 1-30 ರ ಸುಮಾರಿಗೆ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸಾಮಾಜಿಕ ಜಾಗೃತಿಯ ಚಿರಸ್ಮರಣೆ :
ಶೈಕ್ಷಣಿಕ ಕ್ಷೇತ್ರದಲ್ಲಿ ಮಾದರಿಯಾಗಿದ್ದ ಪ್ರಕಾಶ ಕುಂಜಿ, ನಿವೃತ್ತಿಯ ನಂತರವೂ ಸಮಾಜಮುಖಿ ಚಟುವಟಿಕೆಗಳಲ್ಲಿ ಶ್ರಮಿಸಿದರು. ಹಲವು ಸಂಘಟನೆಗಳಲ್ಲಿ ಪ್ರಮುಖ ಪಾತ್ರವಹಿಸಿ, ಕೋಮು ಸೌಹಾರ್ದತೆಯನ್ನು ಉತ್ತೇಜಿಸುವ ಮೂಲಕ ಎಲ್ಲರ ಪ್ರೀತಿ ಮತ್ತು ವಿಶ್ವಾಸಕ್ಕೆ ಪಾತ್ರರಾಗಿದ್ದರು. ಅವರ ಆದರ್ಶ ನಿಲುವುಗಳು ಮತ್ತು ಸಹೃದಯತನವು ಜನರಲ್ಲಿ ಅಪಾರ ಪ್ರಭಾವ ಬೀರಿದ್ದವು.
ಮೃತರು ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ. ಅವರ ಅಗಲಿಕೆ ಸಾಂಸ್ಕೃತಿಕ, ಶೈಕ್ಷಣಿಕ, ಮತ್ತು ಸಾಮಾಜಿಕ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕಸಾಪ ಅಧ್ಯಕ್ಷ ಗೋಪಾಲಕೃಷ್ಣ ನಾಯಕ ತಿಳಿಸಿದ್ದಾರೆ.
