ಜಮಗೋಡ ಬಳಿ ಕಾರ ಪಲ್ಟಿ : ದಂಪತಿಗಳು ಸಾವು
ಅಂಕೋಲಾ : ಕಾರ ನಿಯಂತ್ರಣ ತಪ್ಪಿ, ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಗಳು ಮೃತಪಟ್ಟ ಘಟನೆ ರಾಷ್ಟಿçÃಯ ಹೆದ್ದಾರಿಯ 63 ರ ಬೊಳೆಯ ಜಮಗೋಡ ಬಳಿ ಭಾನುವಾರ ಸಂಜೆ ನಡೆದಿದೆ.
ಬಾಂಬೆ ಅಂದೇರಿಯ ನಾಗೇಂದ್ರ ಸದಾಶಿವ ಭಟ್ಕಳ (72) ಹಾಗೂ ಇತನ ಪತ್ನಿ ಸುಧಾ ನಾಗೇಂದ್ರ ಭಟ್ಕಳ (65) ಮೃತ ಪಟ್ಟವರು. ಕಾರಿನಲ್ಲಿ ಒಟ್ಟು ಐವರು ಪ್ರಯಾಣಿಸುತ್ತಿದ್ದು ನಮಿತಾ ನಿತ್ಯಾನಂದ ನಾಯಕ (56), ದೀಪ್ತಿ ವಿಶ್ವಾಸ ಪ್ರಭು (36) ಹಾಗೂ ಮಂಗಳೂರಿನ ನಿತ್ಯಾನಂದ ವಾಮನ ನಾಯಕ ಗಾಯಗೊಂಡವರು. ದೀಪ್ತಿ ವಿಶ್ವಾಸ ಪ್ರಭು ಅವರಿಗೆ ಗಂಭೀರ ಸ್ವರೂಪ ಗಾಯವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ.
ನಾಗೇಂದ್ರ ಸದಾಶಿವ ಭಟ್ಕಳ ಅವರ ಕುಟುಂಬದವರು ಮಂಗಳೂರಿನಿ0ದ ಅಂಕೋಲಾದ ಶ್ರೀ ಲಕ್ಷಿö್ಮÃನಾರಾಯಣ ಮಹಾಮಾಯ ದೇವಸ್ಥಾನಕ್ಕೆ ಶನಿ ಶಾಂತಿ ಧಾರ್ಮಿಕ ಕಾರ್ಯಕ್ರಮ ನೆರವೇರಿಸಲು ಆಗಮಿಸಿ ಕಳೆದ ಮೂರು ದಿನಗಳಿಂದ ತಂಗಿದ್ದರು. ಭಾನುವಾರ ಎಲ್ಲ ಧಾರ್ಮಿಕ ಕಾರ್ಯಕ್ರಮ ಮುಗಿಸಿ ವಾಪಸ್ ಮಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ದೇವಸ್ಥಾನದಿಂದ ಹೊರಟ ಕೇವಲ 2 ಕೀಮಿ ಅಂತರದಲ್ಲಿ ಕಾರ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದಿದೆ.
ಅಪಘಾತದಿಂದ ನುಜ್ಜುಗುಜ್ಜಾದ ಕಾರಿನಲ್ಲಿ ಐವರು ಸಹ ಸಿಲುಕಿ ಹಾಕಿಕೊಂಡಿದ್ದರು. ಕೂಡಲೆ ಬೊಳೆ ಗ್ರಾಮಸ್ಥರು ಕಾರಿನಲ್ಲಿದ್ದರನ್ನು ಹೊರ ತೆಗೆದು ಚಿಕತ್ಸೆಗಾಗಿ ಅಂಕೋಲಾದ ಆಸ್ಪತ್ರೆ ಸಾಗಿಸಿದ್ದಾರೆ. ಸಿಪಿಐ ಚಂದ್ರಶೇಖರ ಮಠಪತಿ ಹಾಗೂ ಪಿಎಸೈ ಸುನೀಲ ಹುಲ್ಲೋಳ್ಳಿ ಸ್ಥಳಕ್ಕಾಗಿಸಿ ಪ್ರಕರಣದ ಮಾಹಿತಿ ಪಡೆದುಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.