ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
ಅಂಕೋಲಾ: ಹಟ್ಟಿಕೇರಿಯಲ್ಲಿರುವ ತಮ್ಮ ನಿವಾಸದ ಎದುರಿನ ತುಳಸಿಕಟ್ಟೆಯ ಬಳಿ ವೈದ್ಯ ಡಾ. ರಾಜು ಪಿಕಳೆ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಯಾವುದೋ ವಿಷಯ ಮನಸ್ಸಿಗೆ ಹಚ್ಚಿಕೊಂಡಿದ್ದ ಡಾ. ರಾಜು ಪಿಕಳೆ ಅವರು ಈ ತೀವ್ರ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ. ಘಟನೆಯ ಬಗ್ಗೆ ಸಂಪೂರ್ಣ ವಿವರ ತಿಳಿದು ಬರಬೇಕಿದೆ.