ಅಂಕೋಲಾ : ದುಷ್ಕರ್ಮಿಗಳ ಹತ್ಯೆ ಯತ್ನಕ್ಕೆ ಒಳಗಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಮುಖಂಡ ಗೃಹ ಸಚಿವ ಪರಮೇಶ್ವರ ಅವರ ಆಪ್ತ ಗೋಪಾಲಕೃಷ್ಣ ನಾಯಕ ಶನಿವಾರ ಆಸ್ಪತ್ರೆಯಿಂದ ಬಿಡುಗಡೆ ಆಗಿ ಮಣಿಪಾಲದಿಂದ ಅಂಕೋಲಾಕ್ಕೆ ಸಂಜೆ ಐದು ಗಂಟೆ ಹೊತ್ತಿಗೆ ಆಗಮಿಸಲಿದ್ದಾರೆ.

ಈ ಸಂದರ್ಭದಲ್ಲಿ ಗೋಪಾಲಕೃಷ್ಣ ನಾಯಕ ಅವರ ಅಭಿಮಾನಿ ಬಳಗದ ವತಿಯಿಂದ ಸಂಜೆ ಐದು ಗಂಟೆಗೆ ಪಟ್ಟಣದ ಕಣಕಣೇಶ್ವರ ದೇವಸ್ಥಾನದಲ್ಲಿ ಪೂಜೆಯನ್ನು ಹಮ್ಮಿಕೊಂಡಿದ್ದು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿಲು ಅಭಿಮಾನಿ ಬಳಗದ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.