ಅಂಕೋಲಾ : ಡಿವೈಡರ್ ಗೆ ಬೈಕ್ ಬಡೆದು ಇಬ್ಬರು ಯುವಕರು ಗಂಭೀರ ಸ್ಥಿತಿಯಲ್ಲಿ ಗಾಯಗೊಂಡ ಘಟನೆ ಪಟ್ಟಣದ ಕಾರವಾರ ರಸ್ತೆಯಲ್ಲಿ ನಡೆದಿದೆ.

ಹೊಸಕಂಬಿಯ ವಿಶ್ವನಾಥ ಹನುಮಂತ ಆಗೇರ ಮತ್ತು ಆತನ ಸ್ನೇಹಿತನಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ. ಇಬ್ಬರನ್ನು ಸ್ಥಳದಿಂದ ತಾಲೂಕಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.

ಡಾ. ಸಂಜು ನಾಯಕ ಹಾಗೂ ಪೊಲೀಸರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಪಘಾತದ ಸಂಪೂರ್ಣ ವಿವರ ಇನ್ನಷ್ಟೇ ತಿಳಿದು ಬರಬೇಕಿದ್ದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.