ಅಂಕೋಲಾ : ಕುಮಟಾ ತಾಲೂಕಿನಲ್ಲಿ ಜರುಗಿದ ಉತ್ತರಕನ್ನಡ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಪಟ್ಟಣದ ಜೈಹಿಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ವಿಶ್ವಜ ಪ್ರಸನ್ನ ನಾಯಕ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಸಾಧನೆಗೆ ಜೈಹಿಂದ ಆಡಳಿತ ಮಂಡಳಿಯ ಅಧ್ಯಕ್ಷರು, ಸದಸ್ಯರು, ಶಾಲೆಯ ಮುಖ್ಯಪಾಧ್ಯಪಕ ಮಹೇಶ ನಾಯ್ಕ, ದೈಹಿಕ ಶಿಕ್ಷಕ ಚಿದಂಬರ ಪಟಗಾರ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.
