TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫೆ. 13-14 ರಂದು ಬೆಂಗಳೂರಿನಲ್ಲಿ ಬೃಹತ ಪ್ರತಿಭಟನೆ

Feb 6, 2024 | ವಿಶೇಷ |

ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಫೆ. 13-14 ರಂದು ಬೆಂಗಳೂರಿನಲ್ಲಿ ಬೃಹತ ಪ್ರತಿಭಟನೆ

ಅಂಕೋಲಾ : ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಮಾಸಿಕ ವೇತನ 15 ನಿಗದಿ ಮಾಡುವಂತೆ ಮತ್ತು ಇತರೆ ಸಮಸ್ಯೆಗಳ ಪರಿಹಾರಕ್ಕಾಗಿ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಫೆ. 13-14 ನಲ್ಲಿ ರಾಜ್ಯ ಮಟ್ಟದ ‘ವಿಧಾನ ಸೌಧ ಚಲೋ’ ಬೃಹತ್ ಪ್ರತಿಭಟನೆಯ ಹಿನ್ನಲೆಯಲ್ಲಿ ಅಂಕೋಲಾ ತಾಲೂಕು ಮಟ್ಟದ ಸಮಾವೇಶವನ್ನು ಪಟ್ಟಣದಲ್ಲಿ ನಡೆಯಿತು.

 ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಉಕ ಜಿಲ್ಲಾ ಸಲಹೆಗಾರ ಗಂಗಾಧರ ಬಡಿಗೇರ ಮಾತನಾಡಿ 8 ವರ್ಷಗಳ ಹಿಂದೆ ರಾಜ್ಯ ಸರ್ಕಾರ, ಜಾರಿಗೊಳಿಸಿದ ಆರ್.ಸಿ.ಹೆಚ್ ಪೋರ್ಟಲ್‌ಗೆ ಲಿಂಕ್ ಮಾಡಿದ್ದು ಆಶಾ ಕಾರ್ಯಕರ್ತೆಯರಿಗೆ ದೊಡ್ಡ ಶಾಪವಾಗಿದೆ. ವಿವಿಧ ದಾಖಲೆಗಳ ಪ್ರಕಾರ ಪ್ರತಿ ತಿಂಗಳು ಕನಿಷ್ಠ ಶೇ.25-30ರಷ್ಟು ಅಂದರೆ 10,000 ರಿಂದ 12,000 ಆಶಾಗಳು ಆರ್.ಸಿ.ಹೆಚ್ ಪೋರ್ಟಲ್‌ನ ಸಮಸ್ಯೆಗಳಿಂದ ದೊಡ್ಡ ಮೊತ್ತದ ನಷ್ಟಕ್ಕೆ ಒಳಗಾಗಿದ್ದಾರೆ.

ಆಶಾಗಳು ಕಷ್ಟ ಪಟ್ಟುದುಡಿದ ಹಣ ಸೋರಿಕೆಯಾಗುತ್ತಲೇ ಇದೆ. ಈ ಹಣಎಲ್ಲಿ ಹೋಗುತ್ತಿದೆ?ಎಂಬ ಪ್ರಶ್ನೆ ಆಶಾಗಳನ್ನು ಕಾಡುತ್ತಲೇ ಇದೆ. ಇದನ್ನು ಸರಿಪಡಿಸುವಂತೆ ಸಂಘವು ಸಾಕಷ್ಟು ಬಾರಿ ಪ್ರತಿಭಟನೆ ನಡೆಸಿದೆ, ಆರೋಗ್ಯ ಸಚಿವರ ಹಾಗೂ ಉನ್ನತ ಅಧಿಕಾರಿಗಳ ಉಪಸ್ಥಿತಿಯಲ್ಲಿ ಹಲವು ಸುತ್ತಿನ ಮಾತುಕತೆ ನಡೆಸಿದೆ. ಸಾಕಷ್ಟು ದಾಖಲೆಗಳನ್ನ ಸಹ ಸಂಘವು ನೀಡಿದೆ. ಆದರೂ ಆರೋಗ್ಯ ಇಲಾಖೆ ಹೇಗಾದರೂ ಈ ಪೋರ್ಟಲ್‌ಗೆ ಲಿಂಕ್ ಮಾಡಿ ಪ್ರೋತ್ಸಾಹಧನ ನೀಡುವ ಮಾದರಿಯನ್ನು ಉಳಿಸಿಕೊಳ್ಳುವ ತನ್ನ ಹಠಮಾರಿಧೋರಣೆನ್ನು ಮುಂದುವರೆಸಿದೆ ಎಂದರು.

ಈ ಎಲ್ಲ ಸಮಸ್ಯೆಗಳ ಏಕೈಕ ಪರಿಹಾರವೆಂದರೆ ಆಶಾಗಳ ವೇತನ ಪಾವತಿ ಪ್ರಕ್ರಿಯೆಯನ್ನು ಆರ್.ಸಿ.ಹೆಚ್ ಪೋರ್ಟಲ್ ನಿಂದ ಡಿ-ಲಿಂಕ್ ಮಾಡುವುದು. ಈ ಹಿನ್ನಲೆಯಲ್ಲಿ, ಈ ಬೇಡಿಕೆಯ ಜೊತೆಗೆ ರೂ.15,000 ನಿಶ್ಚಿತ ವೇತನ ನೀಡುವಂತೆ, ಇನ್ನಿತರ ನ್ಯಾಯ ಸಮ್ಮತ ಬೇಡಿಕೆಗಳನ್ನು ಈಡೇರಿಸುವಂತೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ಅಂಕೋಲಾ ತಾಲ್ಲೂಕು ಸೇರಿದಂತೆ ಜಿಲ್ಲೆ ಎಲ್ಲ ಆಶಾ ಸೋದರಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ಪ್ರತಿಭಟನೆಯನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕಾಧ್ಯಕ್ಷೆ ಚಂದ್ರಕಲಾ ಒ ನಾಯ್ಕ, ಉಪಾಧ್ಯಕ್ಷರಾದ ಶಾರದಾ ನಾಯಕ, ನಾಗರತ್ನಾ ನಾಯಕ, ಮಾಲತಿ ನಾಯಕ, ಸುನಿತಾ ಗುಣಗಾ, ಜುಲೇಕಾ,ತಾರಾ ನಾಯ್ಕ, ಕಾರ್ಯದರ್ಶಿ ಸಂಗೀತಾ ನಾಯ್ಕ ಜಂಟಿ ಕಾರ್ಯದರ್ಶಿಗಳಾದ ಸವಿತಾ ಬಿ ನಾಯಕ, ಗಿರಿಜಾ ವೆರ್ಣೇಕರ್ ಸದಸ್ಯರಾದ ಸೌಭಾಗ್ಯ ಬಂಟ, ಪ್ರತಿಭಾ ನಾಯಕ, ರೂಪಾ ನಾಯ್ಕ, ರೋಹಿಣಿ ಗೌಡ, ಪ್ರೀತಿ ಭಂಟ್ ಸೇರಿದಂತೆ ತಾಲೂಕಿನ ಎಲ್ಲಾ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Share:

Rate:

Previousಕೇಣಿ ಕ್ರಾಸ್‌ನಲ್ಲಿ ಮಟ್ಕಾ ಆಡಿಸುತ್ತಿದ್ದವನ ಬಂಧನ
Nextಗಂಡನ ತಮ್ಮನಿಂದ ದೈಹಿಕವಾಗಿ ಹಲ್ಲೆ ಹಾಗೂ ಬಟ್ಟೆ ಹರಿದು ಮಾನಕ್ಕೆ ಕುಂದು : ಮಹಿಳೆಯಿಂದ ದೂರು

Related Posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್‌ನಿಂದ ಅಮದಳ್ಳಿ ದೇವಸ್ಥಾನಕ್ಕೆ 3 ಲಕ್ಷ ರು. ನೆರವು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್‌ನಿಂದ ಅಮದಳ್ಳಿ ದೇವಸ್ಥಾನಕ್ಕೆ 3 ಲಕ್ಷ ರು. ನೆರವು

January 8, 2024

ನೀತಿ ಸಂಹಿತೆ ಜಾರಿ : ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರ

ನೀತಿ ಸಂಹಿತೆ ಜಾರಿ : ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರ

March 21, 2024

ಆತ್ಮವಿಶ್ವಾಸ ಬೆಳೆಸುವಂತಹ ಶಿಕ್ಷಣ ನೀಡಿ : ಡಾ. ಪ್ರೀತಿ ಬಂಡಾರ್ಕರ್

ಆತ್ಮವಿಶ್ವಾಸ ಬೆಳೆಸುವಂತಹ ಶಿಕ್ಷಣ ನೀಡಿ : ಡಾ. ಪ್ರೀತಿ ಬಂಡಾರ್ಕರ್

October 26, 2023

ನಿವೃತ್ತಿ ಹೊಂದಿದ 11ಜನ ಅಧಿಕಾರಿ, ಸಿಬ್ಬಂದಿಗೆ ಸನ್ಮಾನ

ನಿವೃತ್ತಿ ಹೊಂದಿದ 11ಜನ ಅಧಿಕಾರಿ, ಸಿಬ್ಬಂದಿಗೆ ಸನ್ಮಾನ

June 10, 2022

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಕ್ಯಾಷಿಯರ್  ಮೇಲೆ  ಅತ್ಯಾಚಾರಕ್ಕೆ ಯತ್ನ ;
    ಕ್ಯಾಷಿಯರ್ ಮೇಲೆ  ಅತ್ಯಾಚಾರಕ್ಕೆ ಯತ್ನ ;
  • ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
    ಅಂಕೋಲಾದಿ0ದ ಕರ್ನಾಟಕದ ಗಡಿ ಗೋವಾದಕ್ಕೆ ಜೂಜಾಟದ ವಲಸೆ
  • ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
    ಬಾಳೆಗುಳಿ ಪ್ಲೆöÊಓವರ್ ಬಳಿ ಗಾಂಜಾ ಸೇವಿಸಿದ್ದ ವ್ಯಕ್ತಿಯ ಬಂಧನ
  • ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
    ಗೊಬ್ಬರದ ಗುಂಡಿಗೆ ಬಿದ್ದು ಎರಡು ವರ್ಷದ ಮಗು ಸಾವು
  • ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ
    ಅಂಕೋಲಾದ ಬೆಳಂಬಾರದಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 7 ಯುವಕರ ಮೇಲೆ ಪ್ರಕರಣ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy