ಯಲ್ಲಾಪುರ : ಕನ್ನಡ ಸಾಹಿತ್ಯ ಪರಿಷತ್ತು ಉತ್ತರಕನ್ನಡ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಯಲ್ಲಾಪುರ ಘಟಕದ ವತಿಯಿಂದ 2021-2022 ನೇ ಸಾಲಿನ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಭಾಷಾ ವಿಷಯದಲ್ಲಿ ಶೆ.100 ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಪಟ್ಟಣದ ಅರಣ್ಯ ಭವನದಲ್ಲಿ ನಡೆಯಿತು.

ಒಟ್ಟೂ ೭೯ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ವಾಸರೆ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ಕನ್ನಡ ಭಾಷೆಯಲ್ಲಿ ಶೆ.1೦೦ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿ ಸಾಹಿತ್ಯಪರಿಷತ್ ವತಿಯಿಂದ ಅಭಿನಂದಿಸಲಾಗುತ್ತಿದೆ. ರಾಜ್ಯದಲ್ಲಿಯೇ ಮೊದಲಬಾರಿಗೆ ಇಂತಹ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಆಯೋಜಿಸಲಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಕಸಾಪ ಜಿಲ್ಲಾ ಖಜಾಂಚಿ ಮುರ್ತಜಾ ಹುಸೇನ್, ತಾಲೂಕಾ ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಿತೀಶ ತೊರ್ಕೆ, ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಆರ್.ಆರ್.ಭಟ್ಟ ವೇದಿಕೆಯಲ್ಲಿ ಇದ್ದರು.

ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿದ್ವಾನ್ ಸುಬ್ರಹ್ಮಣ್ಯ ಭಟ್ಟ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪತ್ರಕರ್ತ ಜಿ.ಎನ್. ಭಟ್ ತಟ್ಟಿಗದ್ದೆ ನಿರ್ವಹಿಸಿ, ವಂದಿಸಿದರು.