ಅಪ್ರಾಪ್ತ ಬಾಲಕಿಯ ಮೇಲೆ ಮುದಿಯಪ್ಪನ ಲೈಂಗಿಕ ದೌರ್ಜನ್ಯ

ಅಂಕೋಲಾ : ಅಪ್ರಾಪ್ತ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ಪುಸಲಾಯಿಸಿ ತೋಟಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸೆಗಿದ ಆರೋಪದ ಮೇಲೆ 72 ವರ್ಷದ ವೃದ್ದನÀ ಮೇಲೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಹೆಗ್ಗಾರದ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಹೆಗ್ಗಾರದ ಕೃಷ್ಣ ಶಿವರಾಮ ಭಟ್ಟ (72) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿತನ್ನು ವೈಧ್ಯಕೀಯ ತಪಾಸಣೆಗೆ ಒಳ ಪಡಿಸಿ, ನ್ಯಾಯಾಧೀಶರ ಮುಂದೆ ಹಾಜರಪಡಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಘಟನೆ ಏನು :
ಮೇ. 10 ರಂದು ಆರೋಪಿ ಕೃಷ್ಣ ಶಿವರಾಮ ಭಟ್ಟ ಇತನ 10 ವರ್ಷದ ಬಾಲಕಿಗೆ ತಿಂಡಿ ಕೊಡುತ್ತೇನೆಂದು ಪುಸಲಾಯಿಸಿಕೊಂಡು ತನ್ನ ತೋಟಕ್ಕೆ ಕರೆದೊಯ್ದು ಮೈ ಕೈ ಮುಟ್ಟಿ, ಲೈಂಗಿಕ ದೌರ್ಜನ್ಯ ಎಸೆಗಿದ್ದಾನೆ. ಈ ವಿಷಯವನ್ನು ಯಾರಿಗಾದರೂ ಹೇಳಿದಲ್ಲಿ ಜೀವ ಸಮೇತ ಬಿಡುವದಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸಿಪಿಐ ಶ್ರೀಕಾಂತ ತೋಟಗಿ ಅವರ ಮಾರ್ಗದರ್ಶನದಲ್ಲಿ, ಪಿಎಸೈ ಸುಹಾಸ್ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.