TRENDING:

ಎರಡು ಡಜನ್ ಪುರುಷರನ್ನು ಮದುವೆಯಾಗಿ ಕೈಕೊಟ್ಟ ಕಿಲಾಡಿ ಮಹಿಳೆ...
ಪೊಲೀಸ್  ಸಿಬ್ಬಂದಿಗಳಿಗೆ  ಅಫಘಾತಪಡಿಸಿ  ನಾಪತ್ತೆಯಾದ  ರಿಕ್ಷಾ...
ಅಂಕೋಲಾದ ಶಿಕ್ಷಕನೊಬ್ಬನ ದೋಖಾ ಪ್ರೇಮ ಕಹಾನಿ....
Karwar Times
  • Home
  • ಅಂಕಣ
  • ಅಪರಾಧ
  • ಜಿಲ್ಲೆ
  • ರಾಜಕೀಯ
  • ವಿಶೇಷ

Select Page

ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ

Feb 24, 2026 | Uncategorized |

ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ

ಬಸ್‌ನ ನಾಮಫಲಕ ಬಿದ್ದು ವಿದ್ಯಾರ್ಥಿಗೆ ಗಾಯ;

ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ

ಅಂಕೋಲಾ : ಸಾರಿಗೆ ಬಸ್‌ನ ಹಿಂಭಾಗದಲ್ಲಿ ಅಳವಡಿಸಲಾಗಿದ್ದ ನಾಮಫಲಕ (ಬೋರ್ಡ್) ಬಿದ್ದು ವಿದ್ಯಾರ್ಥಿಯ ತಲೆಗೆ ತಗುಲಿ ಗಾಯಗೊಂಡ ಘಟನೆ ಅಂಕೋಲಾ ತಾಲೂಕಿನ ಅಜ್ಜಿಕ್ಕಟ್ಟೆ ಸಮೀಪ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಪ್ರಥಮ ಚಿಕಿತ್ಸೆ ನೀಡದೆ ಮಧ್ಯರಸ್ತೆಯಲ್ಲಿಯೇ ಇಳಿಸಿ ಬಸ್ ಮುಂದಕ್ಕೆ ಸಾಗಿದರೆಂಬ ಆರೋಪದ ಮೇರೆಗೆ ಬಸ್ ನಿರ್ವಾಹಕಿಯ ವಿರುದ್ಧ ದೂರು ನೀಡಲಾಗಿದೆ.

ಪೂಜಗೇರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎ. ದ್ವಿತೀಯ ವರ್ಷದ ವಿದ್ಯಾರ್ಥಿ ತ್ರೀಮೂರ್ತಿ ಶಾಂತಾ ನಾಯ್ಕ ಗಾಯಗೊಂಡ ವಿದ್ಯಾರ್ಥಿ. ಭಟ್ಕಳ ಡಿಪೋದ ನಿರ್ವಾಹಕಿ ಸುನೀತಾ ವಿರುದ್ಧ ವಿದ್ಯಾರ್ಥಿಯ ಪಾಲಕರು ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

ಫೆಬ್ರವರಿ 23ರಂದು ಸೋಮವಾರ, ಕಾಲೇಜು ಮುಗಿಸಿಕೊಂಡು ಮನೆಗೆ ತೆರಳಲು ತ್ರೀಮೂರ್ತಿ ನಾಯ್ಕ ಭಟ್ಕಳ–ಕಾರವಾರ ಮಾರ್ಗದ ಬಸ್ ಏರಿದ್ದರು. ಮಧ್ಯಾಹ್ನ 2.15ಕ್ಕೆ ಅಂಕೋಲಾ ಬಸ್ ನಿಲ್ದಾಣದಿಂದ ಹೊರಟ ಬಸ್ ಅಜ್ಜಿಕ್ಕಟ್ಟೆ ಬಳಿ ಸಾಗುತ್ತಿರುವ ವೇಳೆ ಹಿಂಭಾಗದಲ್ಲಿ ಅಳವಡಿಸಿದ್ದ ನಾಮಫಲಕ ಬಿದ್ದು ತಲೆಗೆ ಬಡಿದಿದೆ. ಪರಿಣಾಮ ವಿದ್ಯಾರ್ಥಿಗೆ ತೀವ್ರ ರಕ್ತಸ್ರಾವವಾಗಿದೆ.

ರಕ್ತಸ್ರಾವವಾಗುತ್ತಿರುವುದನ್ನು ಕಂಡಿದ್ದರೂ ನಿರ್ವಾಹಕಿ ತಕ್ಷಣ ಪ್ರಥಮ ಚಿಕಿತ್ಸೆ ನೀಡದೆ, ಸ್ವಲ್ಪ ದೂರದಲ್ಲೇ ವಿದ್ಯಾರ್ಥಿಯನ್ನು ಬಸ್‌ನಿಂದ ಕೆಳಗಿಳಿಸಿ ಮುಂದಕ್ಕೆ ತೆರಳಿದ್ದಾರೆ ಎಂಬ ಆರೋಪ ದೂರಿನಲ್ಲಿ ಉಲ್ಲೇಖವಾಗಿದೆ. ಅಸ್ವಸ್ಥನಾದ ವಿದ್ಯಾರ್ಥಿಯು ಹೇಗೋ ಬೇರೆ ವಾಹನ ಹಿಡಿದು ಮನೆಗೆ ತೆರಳಿದ್ದಾನೆ ಎಂದು ತಿಳಿದು ಬಂದಿದೆ.ಈ ಘಟನೆ ಪ್ರಯಾಣಿಕರಲ್ಲಿಯೂ ಆಕ್ರೋಶಕ್ಕೆ ಕಾರಣವಾಗಿದೆ. ನಿರ್ವಾಹಕಿಯ ಕರ್ತವ್ಯ ನಿರ್ವಹಣೆಯ ಬಗ್ಗೆ ಪ್ರಯಾಣಿಕರಿಂದಲೂ ಅಪಸ್ವರಗಳು ಕೇಳಿಬಂದಿವೆ. ಘಟನೆಗೆ ಸಂಬAಧಿಸಿದAತೆ ಪೊಲೀಸರು ನಿರ್ವಾಹಕಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

Share:

Rate:

Previousಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
Nextಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ

Related Posts

ಅಂಕೋಲಾದಲ್ಲಿ ಬಿಂದಾಸ್ ಆಗಿ ತೆರದುಕೊಂಡ ಕುಟಕುಟಿ

ಅಂಕೋಲಾದಲ್ಲಿ ಬಿಂದಾಸ್ ಆಗಿ ತೆರದುಕೊಂಡ ಕುಟಕುಟಿ

January 6, 2025

ಕಾರವಾರದ ಲಾಡ್ಜಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 6 ಎಲೆ ಮಾನವರ ಬಂಧನ

ಕಾರವಾರದ ಲಾಡ್ಜಲ್ಲಿ ಅಂದರ ಬಾಹರ ಆಟದಲ್ಲಿ ತೊಡಗಿದ್ದ 6 ಎಲೆ ಮಾನವರ ಬಂಧನ

September 7, 2023

ದಿನಕರ ವೇದಿಕೆಯಿಂದ ಅಕ್ಷರ ಬ್ರಹ್ಮ ದಿನಕರ ದೇಸಾಯಿ ಅವರ ಜನ್ಮಾಚರಣೆ

ದಿನಕರ ವೇದಿಕೆಯಿಂದ ಅಕ್ಷರ ಬ್ರಹ್ಮ ದಿನಕರ ದೇಸಾಯಿ ಅವರ ಜನ್ಮಾಚರಣೆ

September 11, 2023

Hello world!

Hello world!

June 7, 2022

Leave a reply Cancel reply

Your email address will not be published. Required fields are marked *

Vedio News

Loading...
  • ಬ್ಲಾಕಮೇಲ ಮಾಡಲಾಗುತ್ತಿದೆ ಎಂದು ವಿಡಿಯೋ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ
  • ಅವರ್ಸಾ ಮೊಬೈಲ್ ಅಂಗಡಿಯಲ್ಲಿ ಕಳ್ಳತನ: ಸಿಸಿ ಕ್ಯಾಮರಾದಲ್ಲಿ ಸೆರೆ
  • ರಾಷ್ಟ್ರೀಯ ಹೆದ್ದಾರಿ 63 ರ ಮಾದನಗೇರಿ ಘಟ್ಟದಲ್ಲಿ ಗುಡ್ಡ ಕುಸಿತ
  • ಹಾರವಾಡದ ಬಳಿ ಕಾರಿಗೆ ಬೆಂಕಿ : ಒರ್ವ ಸಾವು
  • ರಾಮನಗರದಲ್ಲಿ ಯಮರೂಪಿ ಸಾರಿಗೆ ಚಾಲಕರು : ವಿದ್ಯಾರ್ಥಿಗಳು ಬಸ್ ಹತ್ತುತ್ತಿರುವಾಗಲೇ, ಬಸ್ ಚಲಾಯಿಸಿ ಮಕ್ಕಳ ಪ್ರಾಣದ ಮೇಲೆ ಚೆಲ್ಲಾಟವಾಡಿದ ಚಾಲಕ

Recent Posts

  • ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
    ಅಮಾನವೀಯತೆ ಮೆರೆದ ನಿರ್ವಾಹಕಿಯ ಮೇಲೆ ಸಾರಿಗೆ ಇಲಾಖೆಯಿಂದ ಆಗದ ಕ್ರಮ
  • ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
    ಮಧ್ಯರಸ್ತೆಯಲ್ಲಿ ವಿದ್ಯಾರ್ಥಿಯನ್ನು ಇಳಿಸಿ ಅಮಾನವೀಯತೆ ಮೆರೆದ ನಿರ್ವಾಹಕಿ
  • ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
    ಅಂಕೋಲಾದಲ್ಲಿ ಗಫ್‌ಚುಪ್ ಆಗಿ ನಡೆದ ಬಾಲ್ಯ ವಿವಾಹ ಬಯಲು
  • ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
    ಗುಂಡು ಹಾರಿಸಿಕೊಂಡು ವೈದ್ಯ ಆತ್ಮಹತ್ಯೆ
  • ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ  ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ
    ಸೀಬರ್ಡ್ ಯೂನಿಯನ್‌ನ ಮುಖಂಡ ಹಾರವಾಡದ ದೀಪಕ ತಾಂಡೇಲ ಅವರ ಮೇಲೆ ಹಲ್ಲೆ ನಡೆಸಿದ ಗುರುರಾಜ್ ಕೊಳ್ಳೊಂಲ್ಲಿ

ಸಂಪಾದಕರು
ರಾಘು ಕಾಕರಮಠ.
ಸುದ್ದಿ ಹಾಗೂ ಜಾಹೀರಾತಿಗಾಗಿ
9449999775

Designed by Elegant Themes | Powered by WordPress

  • Contact Us
  • Privacy Policy