ಜೊಯಿಡಾ: ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿರುವ ತಾಲ್ಲೂಕಿನ ಹಿಂದುಳಿದ ಗ್ರಾಮ ಪಂಚಾಯ್ತಿ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಬಜಾರಕುಣಂಗ ಗ್ರಾಮ ಪಂಚಾಯಿತಿಗೆ ರಸ್ತೆ, ಸೇತುವೆ ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಿ ಕೊಡುವಂತೆ ಶುಕ್ರವಾರ ಇಲ್ಲಿನ ಸಾರ್ವಜನಿಕರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕಾರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.

ಅತಿಯಾದ ಮಳೆಯಿಂದ ಈ ಭಾಗದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಜೊತೆಗೆ ಸೇತುವೆಗಳ ಅವಶ್ಯಕತೆ ಇದ್ದು ಅವುಗಳನ್ನು ಹಾಗೂ ಇನ್ನಿತರ ಮೂಲ ಸೌಕರ್ಯಗಳ ಕಾಮಗಾರಿಗಳನ್ನು ಮಂಜೂರು ಮಾಡುವಂತೆ ಮಾಜಿ ಶಾಸಕ ಸುನಿಲ್ ಹೆಗಡೆ ಮಾರ್ಗದರ್ಶನದಲ್ಲಿ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೆಕರ ನೇತೃತ್ವದಲ್ಲಿ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಚಿವರು ತಕ್ಷಣವೇ ಕ್ರಮ ಕೈಗೊಳ್ಳಲಾಗುವುದಾಗಿ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಬಜಾರಕುಣಂಗ್ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸದಾನಂದ ಸಾವಂತ, ಮಾಜಿ ಉಪಾಧ್ಯಕ್ಷ ಅಜೀತ್ ಮಿರಾಶಿ, ಸ್ಥಳೀಯ ರೋಹಿದಾಸ್ ಮಿರಾಶಿ ಇದ್ದರು.

ಜೊಯಿಡಾ/ರಾಮನಗರದ ನ್ಯೂಸ್ updates ಗಾಗಿ ಈ ಕೆಳಗಿನ ವಾಟ್ಸಪ್ ಲಿಂಕ್ ನ್ನು ಬಳಸಿಕೊಂಡು ಗ್ರೂಪ್ಗೆ ಸೇರಿಕೊಳ್ಳಿ…

https://chat.whatsapp.com/FwQPbtH4lkpE71sGaWxRXj